×
Ad

Kolar | ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನು ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ

Update: 2026-07-05 17:22 IST

ಕೋಲಾರ : ಕೋಲ್ಕತ್ತಾದ ಹೌರಾ ಜಂಕ್ಷನ್‌ನಿಂದ ಬೆಂಗಳೂರಿನ ಎಸ್‌ಎಂವಿಟಿಗೆ ಆಗಮಿಸುತ್ತಿದ್ದ ದುರಂತ್ ಎಕ್ಸ್‌ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಈ ಹಿನ್ನೆಲೆಯಲ್ಲಿ ತಕ್ಷಣ ಅಲರ್ಟ್ ಆದ ರೈಲ್ವೆ ಪೊಲೀಸರು, ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೆ ಜಂಕ್ಷನ್‌ನಲ್ಲಿ ರೈಲು ನಿಲ್ಲಿಸಿ ಪರಿಶೀಲನೆ ಮಾಡಿದರು.

ಈ ವೇಳೆ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿ ಪ್ರಯಾಣಿಕರನ್ನು ರೈಲಿನಿಂದ ಕೆಳಗಿಳಿಸಿ ಬಂಗಾರಪೇಟೆ ಪ್ಲಾಟ್​ಫಾರ್ಮ್ ನಂ.1ರಲ್ಲಿ ತಪಾಸಣೆ ಮಾಡಿದರು. ಇನ್ನು ಈ ಬೆದರಿಕೆ ಕರೆ ಸಂಬಂಧ ಓರ್ವ ಯುವಕನನ್ನು ಜಿಲ್ಲೆಯ ಬಂಗಾರಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News