Kolar | ಬಸ್-ಬೈಕ್ ಢಿಕ್ಕಿ: ಇಬ್ಬರ ಮೃತ್ಯು
Update: 2026-01-15 00:22 IST
ಕೋಲಾರ : ಶ್ರೀನಿವಾಸಪುರ ತಾಲೂಕಿನ ಕೂಸ್ಸಂದ್ರ ಕ್ರಾಸ್ ಬಳಿ ಚಿಂತಾಮಣಿ ಡಿಪೋದ ಕೆಎಸ್ಸಾರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವುದು ವರದಿಯಾಗಿದೆ.
ಮೃತ ಬೈಕ್ ಸವಾರರನ್ನು ನಾಗರಾಜ್ (26), ಚಂದ್ರಶೇಖರ್ (24) ಎಂದು ಗುರುತಿಸಲಾಗಿದ್ದು, ಶ್ರೀನಿವಾಸ್(26) ಎಂಬವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನ ಸವಾರರು ಗುಲ್ಲು ಕುಂಟೆಯಿಂದ ಗಂಗನಗಾರಿಪಲ್ಲಿಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಾಹನ ಹಿಂಬದಿಯಿಂದ ಗುದ್ದಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಗೌನಿಪಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಶಿವಕುಮಾರ್, ಸಬ್ ಇನ್‌ಸ್ಪೆಕ್ಟರ್ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.