×
Ad

ಕೋಲಾರ | ಎ.4 ರಂದು ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ನಾಮಪತ್ರ ಸಲ್ಲಿಕೆ

Update: 2024-04-02 23:15 IST

ಕೋಲಾರ : ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ಅವರು ಎ.4 ರಂದು ಗುರುವಾರ ನಗರದ ಬಂಗಾರಪೇಟೆ ವೃತ್ತದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಗರದ ಸಿಎಂಆರ್ ಶ್ರೀನಾಥ್ ಅವರ ನಿವಾಸದಲ್ಲಿ ಮಂಗಳವಾರ ಜೆಡಿಎಸ್‌ ಮತ್ತು ಬಿಜೆಪಿ ಸಭೆಯ ನಂತರ ಮಾತನಾಡಿದ ಅವರು ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ ಅವರು ಈ ಸಂದರ್ಭದಲ್ಲಿ ಎರಡು ಪಕ್ಷದ ರಾಷ್ಟ್ರೀಯ,ಮತ್ತು ರಾಜ್ಯ ನಾಯಕರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಬಿಜೆಪಿ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು, ಎಂಎಲ್ಸಿ ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ಕೆಜಿಎಫ್ ವೈ.ಸಂಪಂಗಿ, ಮಾಲೂರು ಕೆ.ಎಸ್ ಮಂಜುನಾಥ್ ಗೌಡ, ಮುಖಂಡರಾದ ಸಿಎಂಆರ್ ಶ್ರೀನಾಥ್ ಬಣಕನಹಳ್ಳಿ ನಟರಾಜ್, ಬೆಗ್ಲಿ ಸೂರ್ಯಪ್ರಕಾಶ್, ಮುನಿರಾಜು ವೈ ಸುರೇಂದ್ರ ಗೌಡ, ವಕ್ಕಲೇರಿ ರಾಮು, ಮುಂತಾದವರು ಇದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News