×
Ad

ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಮೃತ್ಯು; ಹಲವರಿಗೆ ಗಾಯ

Update: 2026-02-09 08:47 IST

ಕೋಲಾರ, ಫೆ.09: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕಾಲೋನಿ ಗೇಟ್ ಸಮೀಪ ಬೊಲೆರೊ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ರವಿವಾರ ತಡರಾತ್ರಿ ಸಂಭವಿಸಿದೆ.

ಮೃತರನ್ನು ಆಂಧ್ರಪ್ರದೇಶದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬ ಕಾರ್ಮಿಕ ಎಂದು ಗುರುತಿಸಲಾಗಿದೆ. ಇವರು ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಶ್ರೀನಿವಾಸಪುರ ಹಾಗೂ ಆಂಧ್ರಪ್ರದೇಶದ ಮದನಪಲ್ಲಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News