×
Ad

ಕೋಲಾರ | ಮೂರು ಅಂತಸ್ತಿನ ಕಟ್ಟಡ ಕುಸಿತ : ಶಾಲೆಯ ಕಾಂಪೌಂಡ್‌ಗೆ ಹಾನಿ

Update: 2024-11-08 18:39 IST

ಕಟ್ಟಡ ಕುಸಿತ

ಕೋಲಾರ : ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ನಗರದ ದಂಡು ರಸ್ತೆಯ ಬಳಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ರಾಜ್ ಕುಮಾರ್ ಎಂಬುವವರಿಗೆ ಸೇರಿದ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯ ನವೀಕರಣದ ಸಮಯದಲ್ಲಿ ಕಟ್ಟಡ ಕುಸಿದಿದೆ ಎನ್ನಲಾಗಿದೆ. ಮನೆಯಲ್ಲಿದ್ದ ಮೂರು ಕುಟುಂಬಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.

ಏಕಾಏಕಿ ಕಟ್ಟಡ ಕುಸಿದಿದ್ದರಿಂದ ಕಟ್ಟಡದ ಮುಂಭಾಗದಲ್ಲಿದ್ದ ಖಾಸಗಿ ಶಾಲೆಯ ಕಾಂಪೌಂಡ್ ಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News