ಕೋಲಾರ | ಗಾಂಜಾ ಮಾರಾಟ ಆರೋಪ: ಇಬ್ಬರ ಬಂಧನ
Update: 2025-06-13 11:10 IST
ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ಮಾಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮನ್ಸೂರ್ ಹುಸೇನ್(34) ಮತ್ತು ದರ್ಶನ್ ರಾಜು(20) ಬಂಧಿತ ಆರೋಪಿಗಳು. ಬಂಧಿತರಿಂದ 15 ಸಾವಿರ ರೂ. ಮೌಲ್ಯದ 460 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ದ್ಯಾಪಸಂದ್ರ ರಸ್ತೆಯ ಇಟ್ಟಿಗೆ ಫ್ಯಾಕ್ಟರಿ ಹಿಂಭಾಗದ ಹುಣಸೆ ಮರದ ಬಳಿ ಗಾಂಜಾ ಮಾರಾಟದಲ್ಲಿ ನಿರತರಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಾಲೂರು ಠಾಣಾ ಪೊಲೀಸರು ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.