×
Ad

ಕೋಲಾರ | ಕತ್ತು ಕೊಯ್ದು ಶಿಕ್ಷಕಿಯ ಹತ್ಯೆ ; ಮಗಳು ಪಾರು

Update: 2024-08-14 22:03 IST

ದಿವ್ಯಶ್ರೀ (42)

ಕೋಲಾರ :  ಶಿಕ್ಷಕಿಯೊಬ್ಬರನ್ನು ಮೂವರು ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಮುತ್ಯಾಲಪೇಟೆ ಬಡಾವಣೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಹತ್ಯೆಯಾದ ಶಿಕ್ಷಕಿಯನ್ನು ದಿವ್ಯಶ್ರೀ (42) ಎಂದು ಗುರುತಿಸಲಾಗಿದೆ. ಶಿಕ್ಷಕಿಯು ಮನೆಯಲ್ಲಿ ಮಗಳ ಜೊತೆ ಇದ್ದಾಗ ಹತ್ಯೆ ಮಾಡಲಾಗಿದೆ. ಆರೋಪಿಗಳು ಮಗಳನ್ನೂ ಹತ್ಯೆಗೈಯಲು ಯತ್ನಿಸಿದ್ದು, ಅದೃಷ್ಟವಶಾತ್ ಮಗಳು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿದ ತಕ್ಷಣ ಕೋಲಾರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಹಾಗೂ ಮುಳಬಾಗಿಲು ಶಾಸಕ ಸಮೃದ್ದಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ‌ .

ಮೃತ ದಿವ್ಯಶ್ರೀ ಮುಳಬಾಗಿಲು ತಾಲ್ಲೂಕು ಮುಡಿಯನೂರು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದರು. ಮುಳಬಾಗಿಲು ನಗರ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News