ಕೋಲಾರ : ಟಿ. ಚನ್ನಯ್ಯನವರು ಅತ್ಯಂತ ದೂರದೃಷ್ಟಿಯಿಂದ ಕೆಲಸ ಮಾಡಿದ ಮಹಾನ್ ನಾಯಕ. ಅವರ ಸಾಧನೆಗಳು ಕೇವಲ ಕೋಲಾರ ಜಿಲ್ಲೆಗೆ ಮಾತ್ರ ಸೀಮಿತವಲ್ಲ, ಬೆಂಗಳೂರಿನ ಅಭಿವೃದ್ಧಿಗೂ ಅಪಾರ ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಕಾಲನಿಗಳನ್ನು ಕಟ್ಟಿಸಿದ್ದಾರೆ. ಅವರ ಈ ಕೊಡುಗೆಗಳು ದೇಶದ ಜನರಿಗೂ ತಲುಪಬೇಕಿದೆ ಎಂದು ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊತ್ತೂರು ಮಂಜುನಾಥ್ ಪ್ರತಿಪಾದಿಸಿದ್ದಾರೆ.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶನಿವಾರ ಆಯೋಜಿಸಲಾಗಿದ್ದ ಟಿ. ಚನ್ನಯ್ಯ ಅವರ 114ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಂಗಾರಪೇಟೆ ಶಾಸಕ ಹಾಗೂ ರಾಜ್ಯ ಹಣಕಾಸು ನಿಗಮದ ಅಧ್ಯಕ್ಷ ಎಸ್. ಎನ್. ನಾರಾಯಣಸ್ವಾಮಿ ಮಾತನಾಡಿ, ಚನ್ನಯ್ಯ ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸಿ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ಹಾಗೂ ಸೂರಿಲ್ಲದವರಿಗೆ ಮನೆ ಕಲ್ಪಿಸಲು 25 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದರು. ಚನ್ನಯ್ಯ ಅವರ ಮೊಮ್ಮಕ್ಕಳು ರಾಜಕೀಯವಾಗಿ ಮುಂದೆ ಬಂದರೆ, ಬಂಗಾರಪೇಟೆ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ಚುನಾವಣೆಗಳಲ್ಲಿ ಅವಕಾಶ ಕಲ್ಪಿಸಿ ಬೆಂಬಲಿಸುವುದಾಗಿ ಆಶ್ವಾಸನೆ ನೀಡಿದರು.

ಮಾಲೂರು ಶಾಸಕ ಹಾಗೂ ಕೋಮುಲ್ ಅಧ್ಯಕ್ಷ ಕೆ.ವೈ. ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ. ಶಿವಕುಮಾರ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಹಮ್ಮದ್ ಹನೀಫ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಾಲಾಜಿ ಚನ್ನಯ್ಯ, ಚನ್ನಯ್ಯ, ಟಿ ಚನ್ನಯ್ಯ ಮೊಮ್ಮಕ್ಕಳಾದ ಡಾ. ಹರೀಶ್, ಇಂಜಿನಿಯರ್ ಹರೀಶ್, ದೀಪಕ್, ಹಿರಿಯ ದಲಿತ ಮುಖಂಡರಾದ ಪಂಡಿತ್ ಮುನಿವೆಂಕಟಪ್ಪ, ಟಿ. ವಿಜಯಕುಮಾರ್, ದಲಿತ್ ನಾರಾಯಣಸ್ವಾಮಿ, ನರಸಾಪುರ ನಾರಾಯಣಸ್ವಾಮಿ, ಟಿ.ಚನ್ನಯ ಪುತ್ರಿ ಪಾರ್ವತಮ್ಮ ಹಾಗೂ ಕುಟುಂಬಸ್ಥರು ಭಾಗವಹಿಸಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor