×
Ad

ಕೋಲಾರ | ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ!

Update: 2024-07-02 23:21 IST

ಕೋಲಾರ : ಅಪ್ರಾಪ್ತ ಬಾಲಕಿಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಜಿಲ್ಲೆಯ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ವರದಿಯಾಗಿದೆ.

ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ವಿದ್ಯಾರ್ಥಿನಿಯನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ, ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News