×
Ad

ಕೋಲಾರ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಓಂಶಕ್ತಿ ಚಲಪತಿ ಆಯ್ಕೆ

Update: 2025-01-30 12:39 IST

ಕೋಲಾರ: ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಬಿಜೆಪಿ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ವಿವಿಧ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಓಂಶಕ್ತಿ ಚಲಪತಿ ಅವರನ್ನು ಕೋಲಾರ ಜಿಲ್ಲಾ ಘಟಕಕ್ಕೆ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಚುನಾವಣಾ ಉಸ್ತುವಾರಿ ಹಾಗೂ ಮಾಜಿ ಎಂಎಲ್ಸಿ ಅಶ್ವಥ್ ನಾರಾಯಣ ಹಾಗೂ ಜಿಲ್ಲಾ ಚುನಾವಣಾ ಸಹ ಉಸ್ತುವಾರಿ ಬಿ.ಪಿ ವೆಂಕಟಮುನಿಯಪ್ಪ ಘೋಷಣೆ ಮಾಡಿದರು.

ನೂತನ ಅಧ್ಯಕ್ಷರಾಗಿ ನೇಮಕವಾದ ನಂತರ ನಗರದ ಬಂಗಾರಪೇಟೆ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು . 

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಂ.ನಾರಾಯಣಸ್ವಾಮಿ, ವೈ ಸಂಪಂಗಿ, ಮಾಜಿ ಅಧ್ಯಕ್ಷ ವೇಣುಗೋಪಾಲ್, ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಮಾಜಿ ಜಿಪಂ ಸದಸ್ಯ ಮಹೇಶ್, ವಿವಿಧ ಮೋರ್ಚಾ ಅಧ್ಯಕ್ಷರಾದ ಅರುಣಮ್ಮ, ಬಾಲಾಜಿ, ತಿಮ್ಮರಾಯಪ್ಪ, ಮುಖಂಡರಾದ ಕೆಂಬೋಡಿ ನಾರಾಯಣಸ್ವಾಮಿ, ಕೃಷ್ಣಮೂರ್ತಿ, ಮಮತಮ್ಮ, ಶಿವಕುಮಾರ್, ತೇಜಸ್, ಮುಂತಾದವರು ಇದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News