ನಗರಸಭೆಗಳಿಗೆ 40 ಕೋಟಿ ರೂ., ಪುರಸಭೆಗಳಿಗೆ 30 ಕೋಟಿ ರೂ. ವಿಶೇಷ ಅನುದಾನ : ಸಚಿವ ಎಚ್.ಸಿ.ಬಾಲಕೃಷ್ಣ
ಕೋಲಾರ, : ರಾಜ್ಯದ ನಗರಸಭೆಗಳಿಗೆ ತಲಾ 40 ಕೋಟಿ ರೂ. ಹಾಗೂ ಪುರಸಭೆಗಳಿಗೆ ತಲಾ 30 ಕೋಟಿ ರೂ. ವಿಶೇಷ ಅನುದಾನ ನೀಡಲು ಸರಕಾರ ಮುಂದಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆಯಲಿದೆ ಎಂದು ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಡಿಪಿ ಸಭೆಯಲ್ಲಿ ಕೋಲಾರ ಶಾಸಕರು ನಗರದ ಸಮಸ್ಯೆಗಳ ಕುರಿತು ಗಮನ ಸೆಳೆದಿದ್ದನ್ನು ಮಾಧ್ಯಮಗಳಲ್ಲಿ ನೋಡಿ, ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳ ಪ್ರಗತಿ ಪರಿಶೀಲನೆ ನಡೆಸಲು ಆಗಮಿಸಿರುವುದಾಗಿ ಹೇಳಿದರು.
ನಗರದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸುಧಾರಣೆಗೆ ಶಾಸಕರು ವಿಶೇಷ ಅನುದಾನ ಕೇಳಿದ್ದು, ನಾಳೆ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಮುಂದಿನ ಒಂದು ತಿಂಗಳೊಳಗೆ ಅಂದಾಜು ಪಟ್ಟಿ ಸಿದ್ಧಪಡಿಸಿ ಕಾಮಗಾರಿಗಳನ್ನು ಪ್ರಾರಂಭಿಸಬಹುದು ಎಂದು ತಿಳಿಸಿದರು.