2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಮಾಜಿ ಸಚಿವ ಎಸ್.ಎನ್. ಬೋಸರಾಜು
ಕನಕಗಿರಿ: 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಎಸ್.ಎನ್. ಬೋಸರಾಜು ಹೇಳಿದರು.
ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಪತ್ರಕರ್ತರ ಜೊತೆ ಮಾತನಾಡಿದರು.
ಸಾರ್ವಜನಿಕರ ಹಿತಕ್ಕಾಗಿ ಕಾಂಗ್ರೆಸ್ ಸರ್ವಜನಾಂಗದ ಪಕ್ಷವಾಗಿ ದೇಶದಲ್ಲಿ ಮಾದರಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಇಂದಿರಾ ಕ್ಯಾಂಟೀನ್, ಅಕ್ಕಿ, ತೊಗರಿ ಬೇಳೆ, ಜೋಳ, ಸಕ್ಕರೆ ಇನ್ನಿತರ ಅಂಶಗಳು ಮುಂದಿನ ದಿನಗಳಲ್ಲಿ ಜನರಿಗೆ ಲಭ್ಯವಾಗಲಿವೆ. ಸರ್ಕಾರ ಬರದ ಬಗ್ಗೆ ಸಮೀಕ್ಷೆ ಮಾಡಲು ಅಧಿಕಾರಿಗಳು ಈಗಾಗಲೇ ಕಾರ್ಯ ಪ್ರಾರಂಭಿಸಿದ್ದಾರೆ.
ಕ್ಷೇತ್ರದಲ್ಲಿ ಯಾರೇ ಶಾಸಕರಿದ್ದರೂ ಸ್ಥಳೀಯ ಕಾರ್ಯಕರ್ತರಿಗೆ ಸಿಗಬೇಕು. ಪಕ್ಷ ಸಂಘಟನೆಯೇ ನನ್ನ ಗುರಿ. ಜನರೊಂದಿಗೆ ನೇರ ಸಂಪರ್ಕ ಇದ್ದರೆ ಮಾತ್ರ ಗೆಲುವು ಸಾಧ್ಯ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
ಯುವಕರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷ ಇನ್ನಷ್ಟು ಬಲಗೊಳ್ಳುತ್ತದೆ. ಯುವ ಸಚಿವರು ಪಕ್ಷಕ್ಕೆ ಹೊಸ ಚೈತನ್ಯ ತರುತ್ತಾರೆ ಎಂದು ಅಭಿಪ್ರಾಯಪಟ್ಟ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದರು.
ತುಂಗಭದ್ರಾ ಡ್ಯಾಂನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ 27 TMC ನೀರನ್ನು ಈ ಹಿಂದಿನ ಸರ್ಕಾರ ಬಿಟ್ಟಿದೆ ಎಂದು ಜನರಿಗೆ ಬಿಜೆಪಿಯವರು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬೋಸರಾಜು ಆರೋಪಿಸಿದರು.