×
Ad

ಕೊಪ್ಪಳ | ಮಾವಿನ ಹಣ್ಣು ತುಂಬಿದ್ದ ಟ್ರಕ್ ಪಲ್ಟಿ; ಚಾಲಕ ಪ್ರಾಣಾಪಾಯದಿಂದ ಪಾರು

Update: 2026-06-08 18:48 IST

ಮುನಿರಾಬಾದ್: ತಮಿಳುನಾಡಿನಿಂದ ಅಹಮದಾಬಾದ್‌ಗೆ ಮಾವಿನ ಹಣ್ಣು ಸಾಗಿಸುತ್ತಿದ್ದ ಟ್ರಕ್ ರಾಷ್ಟ್ರೀಯ ಹೆದ್ದಾರಿ 63ರ ಶಹಾಪುರ ಗ್ರಾಮದ ಸಮೀಪದ ಸೇತುವೆ ಬಳಿ ಪಲ್ಟಿಯಾದ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ.

ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲೆ ಉರುಳಿಬಿದ್ದಿದೆ. ಇದರ ಪರಿಣಾಮ ಟ್ರಕ್‌ಗೆ ಹಾನಿಯಾಗಿದ್ದು, ರಸ್ತೆಯ ಮೇಲೆ ಮಾವಿನ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿವೆ.

ಅಪಘಾತದಲ್ಲಿ ಚಾಲಕ ಚೇತನ (25) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದರಿಂದಾಗಿ ಕೆಲಕಾಲ ಸಂಚಾರ ದಟ್ಟನೆ ಉಂಟಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. 




Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News