×
Ad

ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ : ಬಿಜೆಪಿ ಸಂಸದ ಸಂಗಣ್ಣ ಕರಡಿ

Update: 2024-04-16 13:43 IST

ಸಂಗಣ್ಣ ಕರಡಿ

ಕೊಪ್ಪಳ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ನಾಳೆ(ಎ.17) ಸಮಯ ನಿಗದಿಯಾಗಿದ್ದು, ಅವರ ಭೇಟಿ ಬಳಿಕ‌ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿದರು‌.

ಇಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "  ಮುಖ್ಯಮಂತ್ರಿಗಳ ಭೇಟಿಗೆ ಶಾಸಕ ಲಕ್ಷ್ಮಣ ಸವದಿ ವ್ಯವಸ್ಥೆ ಮಾಡಿದ್ದು, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಕೂಡ ನನ್ನ ಜೊತೆ ಮಾತನಾಡಿದ್ದಾರೆ. ಅಲ್ಲದೆ, ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಸಿಎಂ, ಡಿಸಿಎಂ ಜತೆ ಚರ್ಚಿಸಿ ನನ್ನ ನಿರ್ಣಯ ತಿಳಿಸುತ್ತೇನೆ. ನನ್ನ ಬೇಡಿಕೆ ಏನು ಇದೆ ಎಂಬುದನ್ನು ನಿಮ್ಮ ಮುಂದೆ ಹೇಳುವುದಿಲ್ಲ" ಎಂದು ತಿಳಿಸಿದರು.

ಸಂಗಣ್ಣ ಮನೆಗೆ ಕಾಂಗ್ರೆಸ್‌ ಅಭ್ಯರ್ಥಿ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಸಂಸದ ಸಂಗಣ್ಣ ಕರಡಿ ಅವರ ಮನೆಗೆ ಭೇಟಿ ನೀಡಿ ಚರ್ಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News