×
Ad

Koppal | NEET ಪರೀಕ್ಷೆ ರದ್ದು ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

Update: 2026-05-14 12:55 IST

ಕೊಪ್ಪಳ : ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಕೆಲ ದಿನಗಳ ಹಿಂದೆ ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದ ಕ್ರಮವನ್ನು ಖಂಡಿಸಿ ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಅಶೋಕ ವೃತ್ತದಲ್ಲಿ ಬಿತ್ತಿ ಚಿತ್ರಗಳನ್ನು ಹಿಡಿದುಕೊಂಡು ಬಂದಿದ್ದ ನೂರಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.

ಇದೇ ತಿಂಗಳು 3 ರಂದು ನಡೆದಿದ್ದ ರಾಷ್ಟ್ರೀಯ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ (NEET )ಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಯು (NTA ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಇದಕ್ಕೆ ದೇಶಾದ್ಯಂತ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಕೊಪ್ಪಳದಲ್ಲಿ ಕೂಡ ಪ್ರತಿಭಟನೆ ನಡೆಸಿ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News