×
Ad

ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ : ಜಿಲ್ಲಾಧಿಕಾರಿ ಸುರೇಶ ಇಟ್ನಾಳ

Update: 2025-12-27 22:28 IST

ಕೊಪ್ಪಳ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರೈತರು ಬಯೋಮೆಟ್ರಿಕ್ ಮೂಲಕ ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಹೇಳಿದರು.

ಶನಿವಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಕುರಿತು ಕೃಷಿ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಡಾ. ಸುರೇಶ ಬಿ. ಇಟ್ನಾಳ, ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಲು ಈಗಾಗಲೇ ಕೊಪ್ಪಳ ಜಿಲ್ಲೆಯಲ್ಲಿ 15 ಖರೀದಿ ಕೇಂದ್ರಗಳನ್ನು ತೆರೆದಿದ್ದು ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ. ಪ್ರತಿ ರೈತರಿಂದ ಕಡ್ಡಾಯವಾಗಿ ಬಯೋಮೆಟ್ರಿಕ್ ಮೂಲಕ ನೋಂದಣಿಯನ್ನು ಮಾಡಿಕೊಳ್ಳಲಾಗುವುದು. ಒಂದು ವೇಳೆ ರೈತರ ಬಯೋಮೆಟ್ರಿಕ್ ತೆಗೆದುಕೊಳ್ಳದೆ ಇದ್ದಲ್ಲಿ ಫೇಸ್ ರೀಡಿಂಗ್ ಮೂಲಕ ನೊಂದಣಿಯನ್ನು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರೈತ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.  

ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕೃಷಿ, ಸಹಕಾರ ಮತ್ತು ಕೃಷಿ ಉತ್ಪನ್ನಗಳ ಮಾರಾಟ ಇಲಾಖೆಯ ಅಧಿಕಾರಿಗಳು, ಸೊಸೈಟಿಗಳ ಕಾರ್ಯದಶಿಗಳು ಹಾಗೂ ಇತರೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News