ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕೊಪ್ಪಳದಲ್ಲಿ ಕಾಂಗ್ರೆಸ್ ನಿಂದ ವಿಜಯೋತ್ಸವ ಆಚರಣೆ

Update: 2026-07-25 20:24 IST

ಕೊಪ್ಪಳ: ನೀಟ್ ಪರೀಕ್ಷೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದ ಕೊಪ್ಪಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವನ್ನು ಆಚರಿಸಿದರು.

ಕೊಪ್ಪಳದ ಅಶೋಕ ವೃತ್ತದ ಬಳಿ ನೂರಾರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಜಮಾಯಿಸಿ ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿ ಒಬ್ಬರಿಗೊಬ್ಬರು ಸಿಹಿ ತಿನಿಸುವ ಮೂಲಕ ಸಂಭ್ರಮಿಸಿದರು.

ಕೇವಲ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಅಷ್ಟೇ ಪಡೆಯುವುದಲ್ಲ. ಅದರ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೊಪ್ಪಳ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಾಪುರ, ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ಜ್ಯೋತಿ ಗೊಂಡಬಾಳ, ಮಲ್ಲು ಪೂಜಾರ್, ಕೆ. ಎಂ ಸೈಯದ್, ಕಾಟನ್ ಪಾಷಾ ಸೇರಿದಂತೆ ನೂರಾರು ಕಾರ್ಯಕರ್ತರು ಮತ್ತು ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News