ಗಂಗಾವತಿ : ಎಐಸಿಸಿಟಿಯು (AICTU) ಸಂಯೋಜಿತ ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಆನಂದ್ ತಂದೆ ರಾಮಣ್ಣ ಗುಗ್ರಿ ಹಾಗೂ ಕರ್ನಾಟಕ ಪ್ರಗತಿಪರ ವಾಹನ ಚಾಲಕರು ಮತ್ತು ಸಹಾಯಕರ ಸಂಘದ ತಾಲೂಕ ಅಧ್ಯಕ್ಷರಾಗಿ ಕೊಟ್ರೇಶ್ ಆಯ್ಕೆಯಾಗಿದ್ದಾರೆ.

ಸಂಘಟನೆಯ ರಾಜ್ಯ ಸಮಿತಿ ಸದಸ್ಯೆ ಕಾ.ನಿರ್ಮಲ, ಸ್ಲಂ ಮೋರ್ಚಾ ರಾಜ್ಯ ಸದಸ್ಯ ಚೆನ್ನಯ್ಯ, ಕೊಪ್ಪಳ ಜಿಲ್ಲಾ ಎಐಸಿಸಿಟಿಯು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾದ ಸಣ್ಣ ಹನುಮಂತ, ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಪರಶುರಾಮ್ ಹಾಗೂ ಕರ್ನಾಟಕ ಪ್ರಗತಿಪರ ವಾಹನ ಚಾಲಕರು ಮತ್ತು ಸಹಾಯಕರ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕಿಶು ನಾಯಕ್ ಅವರ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ನೂತನ ಅಧ್ಯಕ್ಷರನ್ನು ಸಂಘಟನೆಯ ಮುಖಂಡರು ಅಭಿನಂದಿಸಿ ಶುಭ ಹಾರೈಸಿದರು. ಪೌರಕಾರ್ಮಿಕರು, ವಾಹನ ಚಾಲಕರು, ಸಹಾಯಕರು ಹಾಗೂ ಕಾವಲುಗಾರರ ಹಕ್ಕುಗಳ ರಕ್ಷಣೆ, ಅವರ ಸಮಸ್ಯೆಗಳ ಪರಿಹಾರ ಮತ್ತು ಸಂಘಟನೆಯ ಬಲವರ್ಧನೆಗೆ ನೂತನ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಮುಖಂಡರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಘಟನೆಯ ಸದಸ್ಯರು, ಪೌರಕಾರ್ಮಿಕರು, ವಾಹನ ಚಾಲಕರು, ಸಹಾಯಕರು ಹಾಗೂ ಕಾವಲುಗಾರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಕೊಪ್ಪಳ ಜಿಲ್ಲಾ ವರದಿಗಾರರು

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ