ಗಂಗಾವತಿ | ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಮುಳುಗಿ ಮೃತ್ಯು
ಗಂಗಾವತಿ : ಹೋಳಿ ಹಬ್ಬದ ಹಿನ್ನೆಲೆ ನದಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ಆಕಸ್ಮಿಕವಾಗಿ ತುಂಗಭದ್ರಾ ನದಿಯಲ್ಲಿ ಮುಳುಗಿದ ಘಟನೆ ಬುಧವಾರ ಸಂಜೆ ನಡೆದಿದೆ.
ಈ ಪೈಕಿ ಒಬ್ಬ ಯುವಕ ಈಜಿ ದಡ ಸೇರಿದರೆ, ಇನ್ನಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತರನ್ನು ಗಂಗಾವತಿಯ ಗಾಂಧಿನಗರ ನಿವಾಸಿಗಳಾದ ಸೂರ್ಯ (17) ಹಾಗೂ ಅಭಿಷೇಕ (17) ಎಂದು ಗುರುತಿಸಲಾಗಿದೆ.
ಹೋಳಿ ಕಾರ್ಯಕ್ರಮಗಳ ಬಳಿಕ ಸ್ನೇಹಿತರೊಂದಿಗೆ ಊಟ ಮಾಡಿಕೊಂಡು ನದಿ ಸ್ನಾನಕ್ಕೆ ತೆರಳಿದ್ದ ವೇಳೆ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಕರಣ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಹಬ್ಬದ ಸಂಭ್ರಮದಲ್ಲಿ ನದಿ-ಕೊಳಗಳಲ್ಲಿ ಸ್ನಾನ ಮಾಡುವಾಗ ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.
ಹಬ್ಬದ ಸಂಭ್ರಮದ ಸಂದರ್ಭದಲ್ಲಿ ನದಿ ಮತ್ತು ಕೊಳಗಳಲ್ಲಿ ಸ್ನಾನ ಮಾಡುವಾಗ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.