×
Ad

ಗಂಗಾವತಿ | ತುಂಗಭದ್ರಾ ನದಿಯಲ್ಲಿ ಈಜಲು ಹೋದ ತೆಲಂಗಾಣದ ವೈದ್ಯೆ ನೀರುಪಾಲು

Update: 2025-02-19 16:17 IST

ಗಂಗಾವತಿ : ತೆಲಂಗಾಣದ ಖಾಸಗಿ ಆಸ್ಪತ್ರೆಯ ವೈದ್ಯೆಯೊಬ್ಬರು ಈಜಲು ಹೋಗಿ ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ಗಂಗಾವತಿ ತಾಲೂಕಿನ ಸಣಾಪುರದ ಬಳಿ ನಡೆದಿದೆ.

ನಾಪತ್ತೆಯಾಗಿರುವ ವೈದ್ಯೆಯನ್ನು ಹೈದರಾಬಾದ್​​ನ ನಾಂಪಲ್ಲಿ ನಿವಾಸಿ ಅನನ್ಯ ಮೋಹನ್​ ರಾವ್ ಎಂದು ಗುರುತಿಸಲಾಗಿದೆ.

ಅನನ್ಯ ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಕಳೆಯಲು ತಮ್ಮ ಸ್ನೇಹಿತರೊಂದಿಗೆ ಸಣಾಪುರ ಸಮೀಪ ಇರುವ ಖಾಸಗಿ ಗೆಸ್ಟ್​ ಹೌಸ್​ಗೆ ಮಂಗಳವಾರ ಸಂಜೆ ಬಂದಿದ್ದರು ಎಂದು ತಿಳಿದು ಬಂದಿದೆ.

ಈ ಗೆಸ್ಟ್ ಹೌಸ್ ಹಿಂದೆ ಇರುವ ತುಂಗಭದ್ರಾ ನದಿಯಲ್ಲಿ ಈ ಮೂವರು ಈಜಲು ಹೋಗಿದ್ದರು. ಈ ಪೈಕಿ ಅನನ್ಯ, ನದಿಯಲ್ಲಿ ಈಜಲು ಸಮೀಪದ ಬಂಡೆಯೊಂದರ ಮೇಲಿಂದ ನೀರಿಗೆ ಜಿಗಿದಿದ್ದಾರೆ. ನದಿಯಲ್ಲಿನ ನೀರಿನ ಸೆಳೆತದಿಂದ ಕೊಚ್ಚಿ ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನೀರಿನಲ್ಲಿ ನಾಪತ್ತೆಯಾಗಿರುವ ಅನನ್ಯ ಅವರ ಶೋಧಕ್ಕೆ ಮುಂದಾಗಿದ್ದಾರೆ. ಕಲ್ಲು ಬಂಡೆಯ ಮೇಲಿಂದ ವೈದ್ಯೆ ಜಿಗಿಯುವ ಕೊನೆಯ ಕ್ಷಣದ ದೃಶ್ಯಾವಳಿ ಅವರ ಸ್ನೇಹಿತರ ಮೊಬೈಲ್​ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಗ್ರಾಮೀಣ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News