×
Ad

ಗಂಗಾವತಿ | ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ವೇಳೆ ರೈಲು ಢಿಕ್ಕಿ: ಮೂವರು ಯುವಕರು ಮೃತ್ಯು

Update: 2024-07-19 12:32 IST

ಗಂಗಾವತಿ, ಜು.19: ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ವೇಳೆ ರೈಲು ಹರಿದ ಪರಿಣಾಮ ಮೂವರು ಯುವಕರು ಮೃತಪಟ್ಟ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೆ ಮಾರ್ಗದಲ್ಲಿ ಗುರುವಾರ ರಾತ್ರಿ ಸಂಭವಿಸಿರುವುದು ವರದಿಯಾಗಿದೆ.

ಮೃತರನ್ನು ನಗರದ ಕಿಲ್ಲಾ ಏರಿಯಾದ ಮೌನೇಶ ಶ್ರೀನಿವಾಸ ಬೈಲ್ ಪತ್ತಾರ (23), ಅಣ್ಣೂರು ಗೌರಮ್ಮ ಕ್ಯಾಂಪಿನ ಸುನಿಲ್ ತಿಮ್ಮಣ್ಣ (23) ಹಾಗೂ ಹಿರೇಜಂತಕಲ್ ನ ವೆಂಕಟ ಭೀಮರಾಯ ಮಂಗಳೂರು (20) ಎಂದು ಗುರುತಿಸಲಾಗಿದೆ.

 ಈ ಮೂವರು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಕನಕಗಿರಿ ರಸ್ತೆಯಲ್ಲಿರುವ ರೈಲು ಹಳಿ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ವೇಳೆ ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುವ ರೈಲು ಮೂವರ ಮೇಲೆಯೇ ಹರಿದಿದ್ದು ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಮದ್ಯದ ಬಾಟಲಿ, ಮೊಬೈಲ್ ಫೋನ್ ಗಳು ಹಾಗೂ ಕೆಲವು ತಿಂಡಿ ಪಾಕೆಟ್ ಗಳು ಪತ್ತೆಯಾಗಿವೆ.

ಸ್ಥಳಕ್ಕೆ ರೈಲ್ವೆ ಪೊಲೀಸ್ ತಂಡ ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News