×
Ad

ಶಾಸಕ ಶಿವರಾಜ ತಂಗಡಗಿಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ಟಿ.ಜೆ.ರಾಮಚಂದ್ರ ಆಗ್ರಹ

Update: 2026-06-06 19:04 IST

ಕನಕಗಿರಿ: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಶಿವರಾಜ ತಂಗಡಗಿ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಎರಡನೇ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಟಿ.ಜೆ.ರಾಮಚಂದ್ರ ಒತ್ತಾಯಿಸಿದ್ದಾರೆ.

ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಯ ಹಿರಿಯ ನಾಯಕರಾಗಿರುವ ಶಿವರಾಜ ತಂಗಡಗಿ ಅವರು ಕನಕಗಿರಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸಚಿವರಾಗಿ ಅನುಭವ ಹೊಂದಿರುವ ಅವರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.

ಉತ್ತರ ಕರ್ನಾಟಕ ಭಾಗಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಹಾಗೂ ಪಕ್ಷ ಸಂಘಟನೆ ದೃಷ್ಟಿಯಿಂದ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯ ಎಂದು ಟಿ.ಜೆ.ರಾಮಚಂದ್ರ ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News