×
Ad

ಕುಟುಂಬ ಸದಸ್ಯರೊಂದಿಗೆ ಅಂಜನಾದ್ರಿಯ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲರು

Update: 2025-08-06 14:36 IST

ಕೊಪ್ಪಳ. ಆ..6 : ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು (ಆಗಸ್ಟ್. 6 ) ರಂದು ಬುಧವಾರ ಕುಟುಂಬ ಸದಸ್ಯರೊಂದಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯ ಶ್ರೀ ಆಂಜನೇಯ ಸ್ಚಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಅಂಜನಾದ್ರಿ ಪಾದಗಟ್ಟಿಯಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ ನಂತರ ಅಂಜನಾದ್ರಿ ಬೆಟ್ಟದ ಮೆಟ್ಟಿಲುಗಳನ್ನು ಕುಟುಂಬ ಸದಸ್ಯರೊಂದಿಗೆ ಹತ್ತಿ ಆಂಜನೇಯ ಸ್ವಾಮಿಯ ದರ್ಶನ ಪಡೆದರು.

ಈ‌ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಸೇರಿದಂತೆ ಇತರೆ ಅಧಿಕಾರಿಗಳು ‌ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News