×
Ad

ಫೆ.17ರಂದು ಕೊಪ್ಪಳದಲ್ಲಿ ಗ್ಯಾರಂಟಿ ಉತ್ಸವ, ಕಾರ್ಯಾಗಾರ : ಸಂಗಮೇಶ ಗುತ್ತಿ

Update: 2026-02-12 19:15 IST

ಕುಕನೂರು: ಫೆಬ್ರವರಿ 17ರಂದು ಕೊಪ್ಪಳ ನಗರದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಉತ್ಸವ ಹಾಗೂ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಕುಕನೂರು ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಂಗಮೇಶ ಗುತ್ತಿ ತಿಳಿಸಿದ್ದಾರೆ.

ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಗ್ಯಾರಂಟಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಿದ ಪ್ರತಿತಾಲೂಕಿನ ಪ್ರತಿಯೊಂದು ಗ್ಯಾರಂಟಿ ಯೋಜನೆಯ ಐದು ಫಲಾನುಭವಿಗಳನ್ನು ಉತ್ಸವದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಉತ್ಸವದ ಕುರಿತು ಸಾರ್ವಜನಿಕರಿಗೆ ಮಾಹಿತಿ ತಲುಪಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯವೆಂದು ಸೂಚಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ವಿವರ ನೀಡಿ, ಸಮಿತಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಖಾಸಿಂಸಾಬ್ ತಳಕಲ್, ಜಿಲ್ಲಾ ಸಮಿತಿ ಸದಸ್ಯ ಮಲ್ಲಿಕಾರ್ಜುನ ಜಕ್ಕಲಿ, ಯಲಬುರ್ಗಾ ತಾಲೂಕಾಧ್ಯಕ್ಷ ಸುಧೀರ್ ಕೂರ್ಲಹಳ್ಳಿ, ಕುಕನೂರು ತಾಲೂಕು ಸಮಿತಿ ಸದಸ್ಯರು ಹಾಗೂ ಕುಕನೂರು ಮತ್ತು ಯಲಬುರ್ಗಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ್ ಬಿರಾದರ ಮತ್ತು ನೀಲಪ್ರಭ ಬಬಲಾದಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News