×
Ad

ಕನಕಗಿರಿ | ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು : ತಹಶೀಲ್ದಾರ್ ವಿಶ್ವಾನಾಥ ಮುರುಡಿ

Update: 2025-12-18 19:01 IST

ಕನಕಗಿರಿ : ‘ಡಿ.21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಅಂದು ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ನೀಡಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ವಿಶ್ವಾನಾಥ ಮುರುಡಿ ಅವರು ಸೂಚಿಸಿದರು.

ಪಟ್ಟಣದ ತಶೀಲ್ದಾರ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪಲ್ಸ್ ಪೋಲಿಯೋ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪಲ್ಸ್ ಪೋಲಿಯೋ ಜಾಗೃತಿ ಸಭೆಯಲ್ಲಿ ಮಾತನಾಡಿದರು.

ಪಟ್ಟಣ ಪಂಚಾಯತ್‌ ಕಸ ವಿಲೇವಾರಿ ವಾಹನಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಕುರಿತು ಆಡಿಯೋ ಹಾಕಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಪ್ರಮುಖ ಸ್ಥಳಗಳಲ್ಲಿ ಜಾಗೃತಿ ಮೂಡಿಬೇಕು. ಲಸಿಕಾ ಕಾರ್ಯಕ್ರಮಕ್ಕೆ ಹೆಚ್ಚಿನ ನೆರವು ಎಲ್ಲಾ ಅಧಿಕಾರಿಗಳು ಕೈ ಜೋಡಿಸಬೇಕೆಂದು ಕೋರಿದರು.

ತಾಲೂಕು ಆರೋಗ್ಯ ಅಧಿಕಾರಿ ಗೌರಿ ಶಂಕರ್, ಪ.ಪಂ ಮುಖ್ಯಾಧಿಕಾರಿ ಲಕ್ಷ್ಮಣ್ ಕಟ್ಟಿಮನಿ, ಶಿಶು ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಇನ್ನಿತರ ಅಧಿಕಾರಿಗಳು ಭಾಗವಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News