×
Ad

ಗಂಗಾವತಿ: ಮನೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿಯ ರಕ್ಷಣೆ

Update: 2024-10-05 10:59 IST

ಕೊಪ್ಪಳ/ ಗಂಗಾವತಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮನೆ ಕುಸಿದು ವ್ಯಕ್ತಿಯೋರ್ವ ಮಣ್ಣಿನಡಿ ಸಿಲುಕಿದ ಘಟನೆ ಗಂಗಾವತಿ ತಾಲೂಕಿನ ಢಣಾಪುರದಲ್ಲಿ ನಡೆದಿದೆ.

ಮಣ್ಣಿನಡಿ ಸಿಲುಕಿದ ವ್ಯಕ್ತಿಯನ್ನು ಪ್ರಕಾಶ ಎಂಬವರನ್ನು ಗ್ರಾಮಸ್ಥರು ತೆರವು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಅವರನ್ನು ಗಂಗಾವತಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಳೆಯಿಂದ ಶ್ರೀರಾಮನಗರ, ಢಣಾಪುರ ಸೇರಿದಂತೆ ಇತರ ಗ್ರಾಮಗಳಲ್ಲಿ ಮನೆಗಳು ಕುಸಿದಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಮುಖಂಡ ರೆಡ್ಡಿ ಶ್ರೀನಿವಾಸ ಅವರು ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News