ತುಂಗಭದ್ರಾ ಜಲಾಶಯದ 33 ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿ ಮತ್ತು ಕೇಂದ್ರ ಜಲಶಕ್ತಿ ಸಚಿವರ ಉಪಸ್ಥಿತಿ
Update: 2026-06-25 13:09 IST
ಕೊಪ್ಪಳ : ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್ ಗಳನ್ನು ಬದಲಿಸಲಾಗಿದ್ದು, ಇದರಲ್ಲಿ 17,18,19 ಮತ್ತು 20ನೇ ಕ್ರಸ್ಟ್ ಗೇಟ್ ಗಳನ್ನು ಎತ್ತುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಜಲಶಕ್ತಿ ಸಚಿವರು ಲೋಕಾರ್ಪಣೆ ಮಾಡಿದರು.
ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್, ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರಡ್ಡಿ ಅವರು ಸೇರಿದಂತೆ ಮೂರು ರಾಜ್ಯಗಳ ಸಚಿವರು ಮತ್ತು ಶಾಸಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.
ಕಳೆದ 2024ರ ಆಗಸ್ಟ್ 10 ರಂದು ನೀರಿನ ರಭಸಕ್ಕೆ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಒಂದು ಮುರಿದು ಅಪಾರ ಪ್ರಮಾಣದ ನೀರು ಪೋಲಾಗಿ ಹರಿದಿತ್ತು. ಇದರಿಂದ ರೈತರು ಸಂಕಷ್ಟ ಅನುಭವಿಸಿದ್ದರು.