ಬೇವೂರು ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಕಾಳಿಂಗ ಎ. ಅಧಿಕಾರ ಸ್ವೀಕಾರ
ಯಲಬುರ್ಗಾ: ತಾಲೂಕಿನ ಬೇವೂರು ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಕಾಳಿಂಗ ಎ. ಸೋಮವಾರ ಅಧಿಕಾರ ಸ್ವೀಕರಿಸಿದರು.
ಹಂಪಿ ಪೊಲೀಸ್ ಠಾಣೆಯಿಂದ ಬೇವೂರು ಠಾಣೆಗೆ ವರ್ಗಾವಣೆಯಾಗಿರುವ ಕಾಳಿಂಗ ಎ. ಅವರು ಈ ಹಿಂದೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಠಾಣಾ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವುದು ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಆದ್ಯತೆಯಾಗಿದೆ ಎಂದರು.
ಸಾರ್ವಜನಿಕರು ಯಾವುದೇ ಸಮಸ್ಯೆ ಅಥವಾ ದೂರುಗಳಿದ್ದರೆ ನೇರವಾಗಿ ಪೊಲೀಸರ ಗಮನಕ್ಕೆ ತರಬೇಕು. ಜನರ ಸುರಕ್ಷತೆ ಹಾಗೂ ಶಾಂತಿ ಕಾಪಾಡಲು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.