ಕನಕದಾಸ ಸಮಾಜದಲ್ಲಿನ ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ದ ಧ್ವನಿ ಎತ್ತಿದ ಮಹಾನ್ ದಾರ್ಶನಿಕ
ಕನಕದಾಸ ಜಯಂತಿ ಆಚರಣೆ
Update: 2025-11-08 11:28 IST
ಕನಕಗಿರಿ: ದಾಸಶ್ರೇಷ್ಠ ಕನಕದಾಸ ಸಮಾಜದಲ್ಲಿನ ಮೂಢ ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ದ ಧ್ವನಿ ಎತ್ತಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಣಧಿಕಾರಿ ರಾಜಶೇಖರ ಹೇಳಿದರು.
ಇಲ್ಲಿನ ತಾಲೂಕು ಪಂಚಾಯತಿಯಲ್ಲಿ ಶನಿವಾರ ನಡೆದ ಕನಕದಾಸ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಅವರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿ, ಸಾಹಿತ್ಯಕ್ಕೆ ತನ್ನದೆ ಆದ ಕೊಡುಗೆ ನೀಡಿ, ಎಲ್ಲರನ್ನು ಸಮಾನತೆ ದೃಷ್ಟಿಕೋನದಿಂದ ನೋಡುವಂತೆ ತಿಳಿಸಿ ವಿಶ್ವಮಾನವರಾದರು ಎಂದರು.
ಸಿಡಿಪಿಓ ವಿರೂಪಾಕ್ಷಯ್ಯ, ಸಿಬ್ಬಂದಿಗಳಾದ ಹುಲುಗಪ್ಪ, ಹನುಮಂತ, ಕುಮಾರ್, ಶರಣಪ್ಪ ಇತರರು ಇದ್ದರು.