×
Ad

ಕನಕಗಿರಿ | ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ

Update: 2025-05-21 17:39 IST

ಸಾಂದರ್ಭಿಕ ಚಿತ್ರ

ಕನಕಗಿರಿ : ಪಟ್ಟಣದ ಯುವಕನೋರ್ವ ಸ್ಥಳೀಯ ಬಸ್ ನಿಲ್ದಾಣದ ಮುಂಭಾಗದಲ್ಲಿನ ಹೈಟೆಕ್ ಶೌಚಾಲಯ ನಿರ್ಮಾಣ ಹಂತದ ಕಟ್ಟಡದ ಹಿಂಭಾಗದಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿ ಬಂದಿದ್ದು, ದೃಶ್ಯವನ್ನು ಸಾರ್ವಜನಿಕರು ಸೆರೆ ಹಿಡಿದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿರುವ ಘಟನೆ ಮಂಗಳವಾರ ನಡೆದಿದೆ.

ಕೆಲ ಯುವಕರು ವಿಡಿಯೋವನ್ನು ಸಮಾಜಿಕ ಜಾಲತಾಣಗಳಿಗೆ ವೈರಲ್ ಮಾಡಿದ್ದು, ವಿಡಿಯೋ ಗಮನಿಸಿದ ಸ್ಥಳೀಯರು ಇಂತಹ ವ್ಯಕ್ತಿಯ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ಪಟ್ಟಣದಿಂದ ಹೊರಗಿಡಬೇಕು ಎಂದು ಆಗ್ರಹಿಸಿದ್ದಾರೆ.

ಮಾನಸಿಕ ಅಸ್ವಸ್ಥೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಯತ್ನಿಸಿದ ಸುದ್ದಿ ತಾಲೂಕಿನಾದ್ಯಂತಹ ಪಸರಿಸಿದ್ದು, ಯುವಕನ ಮೇಲೆ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News