ಕನಕಗಿರಿ | ಮಾನಸಿಕ ಅಸ್ವಸ್ಥ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಪ್ರಕರಣ ದಾಖಲು
Update: 2025-05-21 20:01 IST
ಕನಕಗಿರಿ : ಇಲ್ಲಿನ ಬಸ್ ನಿಲ್ದಾಣದ ಪರಿಸರದಲ್ಲಿ ಸ್ಥಳೀಯ ಯುವಕನೊರ್ವ ಅಸ್ವಸ್ಥ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಬಸ್ ನಿಲ್ದಾಣದ ಪರಿಸರದಲ್ಲಿ ನಿರ್ಮಾಣ ಹಂತದಲ್ಲಿರುವ ಶೌಚಾಲಯಗಳ ಹಿಂದೆ ಮಾನಸಿಕ ಅಸ್ವಸ್ಥ ಮಹಿಳೆಗೆ ಯುವಕನೊರ್ವ ಮೇ 18ರಂದು ಲೈಂಗಿಕ ಕಿರುಕುಳ ನೀಡಿದ್ದು, ವಿಡಿಯೋ, ಪೋಟೋಗಳನ್ನು ಪರಿಶೀಲಿಸಿದಾಗ ಆರೋಪಿ ಪ್ರಕಾಶ ಎಂದು ತಿಳಿದು ಬಂದಿದೆ. ಈ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಿ ಅವರು ನೀಡಿದ ದೂರಿನನ್ವಯ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪಿಐ ಎಂ.ಡಿ.ಫೈಜುಲ್ಲಾ ತಿಳಿಸಿದ್ದಾರೆ,