×
Ad

ಕನಕಗಿರಿ | ಬೇಡ ಸಮಾಜದ ಬಗ್ಗೆ ಅವಹೇಳನ ಆರೋಪ: ಮಾಜಿ ಸಂಸದ ರಮೇಶ ಕತ್ತಿ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ

Update: 2025-10-20 17:37 IST

ಕನಕಗಿರಿ (ಕೊಪ್ಪಳ): ಚಿಕ್ಕೋಡಿ ಕ್ಷೇತ್ರದ ಮಾಜಿ ಸಂಸದ ರಮೇಶ ಕತ್ತಿ ಅವರು ಬೇಡ (ವಾಲ್ಮೀಕಿ) ಸಮಾಜಕ್ಕೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ರಮೇಶ ಕತ್ತಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ತಾಲೂಕು ಘಟಕ ಅಧ್ಯಕ್ಷ ನಾಗರಾಜ ಇದ್ಲಾಪುರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಕತ್ತಿ ಹೇಳಿಕೆಯಿಂದ ಬೇಡ ಸಮಾಜದ ಸ್ವಾಭಿಮಾನಕ್ಕೆ ಧಕ್ಕೆಯುಂಟಾಗಿದೆ. ಒಬ್ಬ ಮಾಜಿ ಜನಪ್ರತಿನಿಧಿಯಾಗಿ, ಸಾರ್ವಜನಿಕವಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪ್ರಜ್ಞೆ ಇಲ್ಲದೆ ವರ್ತಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಪರಿಶಿಷ್ಟ ಪಂಗಡದ ಜನಾಂಗದ ಬಗ್ಗೆ ಅವಹೇಳನ ಮಾಡಿರುವ ಕತ್ತಿಯವರನ್ನು ಬಂಧಿಸಿ ಅವರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಬೇಡ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಇಲ್ಲವಾದಲ್ಲಿ ರಾಜ್ಯಾದ್ಯಂತ ಅವರ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಈ ವೇಳೆ ಗೌರವಧ್ಯಕ್ಷ ಮುದಿಯಪ್ಪ ನಾಯಕ, ಪಂಪಾಪತಿ, ಯಮನೂರ, ಮರುತಿ ವಕೀಲ್ ಇದ್ದರು. ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರಿನ ಪ್ರತಿಯನ್ನು ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News