Kanakagiri | ಪತ್ರಿಕೋದ್ಯಮ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Update: 2026-08-12 18:30 IST
ಕನಕಗಿರಿ: ಇಲ್ಲಿನ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಪದವಿ ಶಿಕ್ಷಣಕ್ಕೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.
ಆಸಕ್ತ ವಿದ್ಯಾರ್ಥಿಗಳು ಆ. 20ರೊಳಗೆ ಯುಯುಸಿಎಂಎಸ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಭಾರ ಪ್ರಾಂಶುಪಾಲ ಬಜರಂಗಬಲಿ ತಿಳಿಸಿದ್ದಾರೆ.
ಭಾಷಾ ವಿಷಯಗಳೊಂದಿಗೆ ಪತ್ರಿಕೋದ್ಯಮ, ರಾಜ್ಯಶಾಸ್ತ್ರ ಹಾಗೂ ಸಮಾಜಶಾಸ್ತ್ರ ವಿಷಯಗಳ ಸಂಯೋಜನೆಯಲ್ಲಿ ಬಿಎ ಪದವಿ ಶಿಕ್ಷಣ ನೀಡಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ವಿಭಾಗದ ಮುಖ್ಯಸ್ಥ ಸಂಗಮೇಶ್ (ಮೊ. 7483177162) ಹಾಗೂ ಪ್ರಾಧ್ಯಾಪಕ ವಿಜಯ್ ಸರೋದೆ (ಮೊ. 9483956996) ಅವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.