×
Ad

ಕನಕಗಿರಿ: ಎತ್ತಿನಬಂಡಿಗೆ ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2026-01-04 11:16 IST

ಕನಕಗಿರಿ: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ಎತ್ತಿನಬಂಡಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನವಲಿ ಗ್ರಾಮದ ಹೊರವಲಯದಲ್ಲಿ ಶನಿವಾ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಬಂಕಾಪುರ ನಿವಾಸಿ ದೇವರಾಜ್(26) ಎಂದು ಗುರುತಿಸಲಾಗಿದೆ.

ದೇವರಾಜ್ ಅವರು ಕನಕಗಿರಿ ಮೂಲಕ ಕಾರಟಗಿ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ದೇವರಾಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಎರಡು ತುಂಡಾಗಿದೆ.

ಈ ಬಗ್ಗೆ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News