Kanakagiri | ದೇವಲಾಪುರ ಆಂಜನೇಯ ದೇವಸ್ಥಾನಕ್ಕೆ 1.5 ಲಕ್ಷ ರೂ. ಡಿಡಿ ವಿತರಣೆ
Update: 2026-07-10 22:04 IST
ಕನಕಗಿರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ವತಿಯಿಂದ ಮುಸಲಾಪುರ ವಲಯದ ದೇವಲಾಪುರ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗಾಗಿ ಮಂಜೂರಾದ 1.50 ಲಕ್ಷ ರೂ. ಮೊತ್ತದ ಡಿಡಿಯನ್ನು ಶುಕ್ರವಾರ ವಿತರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕನಕಗಿರಿ ಹಾಗೂ ಕಾರಟಗಿ ತಾಲೂಕು ಘಟಕದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿಗೆ ಡಿಡಿಯನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್‌ನ ವಿವಿಧ ಯೋಜನೆಗಳು ಹಾಗೂ ಅವುಗಳ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ನಿಂಗಪ್ಪ ಡಿ. ಅಗಸರ, ಮೇಲ್ವಿಚಾರಕ ಯಲ್ಲಾರಿ ಶಿವಾಜಿ, ದೇವಸ್ಥಾನ ಸಮಿತಿ ಅಧ್ಯಕ್ಷ ಕುಂಟೆಪ್ಪ, ಚೆನ್ನಪ್ಪ, ಶಿವಣ್ಣ, ವೆಂಕಟೇಶ್, ಹನುಮೇಶ್, ಶಿವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.