Kanakagiri | ಮನೆ ಮನೆಗೆ ತೆರಳಿ ಜಾತಿ ಪ್ರಮಾಣ ಪತ್ರ ವಿತರಣೆ
Update: 2026-08-01 19:37 IST
ಕನಕಗಿರಿ: ಇಲ್ಲಿನ ಎರಡನೇ ವಾರ್ಡಿನಲ್ಲಿ ಪಟ್ಟಣ ಪಂಚಾಯಿತಿಯ ಕಂದಾಯ ನಿರೀಕ್ಷಕ ಕನಕಪ್ಪ ನಾಯಕ ಹಾಗೂ ಅಂಗನವಾಡಿ ಕಾರ್ಯಕರ್ತೆ ಅಕ್ಕಮಹಾದೇವಿ ಅವರು ಶನಿವಾರ ಮನೆ ಮನೆಗೆ ತೆರಳಿ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ವೇಳೆ ಮಾತನಾಡಿದ ಕಂದಾಯ ನಿರೀಕ್ಷಕ ಕನಕಪ್ಪ ನಾಯಕ, ಜಾತಿ ಪ್ರಮಾಣ ಪತ್ರಕ್ಕಾಗಿ ಸಾರ್ವಜನಿಕರು ಕಚೇರಿಗೆ ಅಲೆದಾಡುವ ಅಗತ್ಯವಿಲ್ಲ. ಅರ್ಹ ಫಲಾನುಭವಿಗಳ ಮನೆಗಳಿಗೆ ತೆರಳಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ಪಟ್ಟಣದ ಉಳಿದ ವಾರ್ಡ್‌ಗಳಲ್ಲೂ ಪ್ರಮಾಣ ಪತ್ರ ವಿತರಣಾ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.