ಕನಕಗಿರಿ: ಪಟ್ಟಣದ ಸೌಂದರ್ಯ ಹೆಚ್ಚಿಸುವ ಉದ್ದೇಶದಿಂದ ಗಂಗಾವತಿ ರಸ್ತೆಯಲ್ಲಿ ಅಳವಡಿಸಿರುವ ಅಲಂಕಾರಿಕ ವಿದ್ಯುತ್ ಕಂಬಗಳಲ್ಲಿ ವಿದ್ಯುತ್ ಸೋರಿಕೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಪಟ್ಟಣದ ಹಮ್ಜಾ ವೆಲ್ಡಿಂಗ್ ವರ್ಕ್ಸ್ ಮುಂಭಾಗ ಹಾಗೂ ಕೆಇಬಿ ಕಚೇರಿ ಸಮೀಪವಿರುವ ವಿದ್ಯುತ್ ಕಂಬವನ್ನು ಮುಟ್ಟಿದರೆ ವಿದ್ಯುತ್ ಪ್ರವಹಿಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ ವೇಳೆ ಕಂಬದ ಬಳಿ ಸ್ಪಾರ್ಕ್ ಕೂಡ ಕಾಣಿಸಿಕೊಳ್ಳುತ್ತಿದೆ ಎನ್ನಲಾಗಿದೆ.

ಈ ರಸ್ತೆಯಲ್ಲಿ ರಾತ್ರಿ ಊಟದ ಬಳಿಕ ನೂರಾರು ಯುವಕರು ಹಾಗೂ ಹಿರಿಯರು ವಾಯುವಿಹಾರಕ್ಕೆ ಬರುತ್ತಾರೆ. ಕಂಬಕ್ಕೆ ಆಕಸ್ಮಿಕವಾಗಿ ತಗುಲಿದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಕೂಡಲೇ ಪಟ್ಟಣ ಪಂಚಾಯಿತಿ ಹಾಗೂ ಜೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿದ್ಯುತ್ ಸೋರಿಕೆ ಸಮಸ್ಯೆಯನ್ನು ದುರಸ್ತಿ ಮಾಡಬೇಕು ಎಂದು ಯುವ ಮುಖಂಡರಾದ ಸಂಪತ್, ಅಭಿಷೇಕ್, ಖಾಸಿಂ, ಕನಕಾಚಲ ಹಾಗೂ ವಿನಯ್ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor