×
Ad

ಕನಕಗಿರಿ | ಹುಲ್ಲಿನ ಬಣವೆಗೆ ಬೆಂಕಿ : ತಪ್ಪಿದ ಅನಾಹುತ

Update: 2025-12-19 21:36 IST

ಕನಕಗಿರಿ: ತಾಲೂಕಿನ ಕರಡೋಣಿ ಗ್ರಾಮದ ಯಂಕಪ್ಪ ಲಕ್ಷ್ಮಪ್ಪ ಎಂಬ ರೈತನ ಹೊಲದಲ್ಲಿ ನಾಲ್ಕು ಟ್ರ್ಯಾಕ್ಟರ್‌ಗಳಷ್ಟು ಹುಲ್ಲಿನ ಬಣವೆಯನ್ನು ಸಂಗ್ರಹಿಸಿ ಇಟ್ಟಿದ್ದ ಸ್ಥಳದಲ್ಲಿ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಮಧ್ಯಾಹ್ನ ಸುಮಾರು 12.30 ಗಂಟೆ ವೇಳೆಗೆ ಬಣವೆಯಿಂದ ಹೊಗೆ ಎದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಬಣವೆ ಮಾಲಕರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬೆಂಕಿ ಕ್ಷಣಾರ್ಧದಲ್ಲಿ ತೀವ್ರಗೊಂಡ ಪರಿಣಾಮ ನಾಲ್ಕು ಟ್ರ್ಯಾಕ್ಟರ್‌ಗಳಷ್ಟು ಹುಲ್ಲಿನ ಬಣವೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಮಾಹಿತಿ ಪಡೆದ ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸುಮಾರು ಎರಡು ಗಂಟೆಗಳ ಕಾಲ ಶ್ರಮಪಟ್ಟು ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳಾದ ಕುಲಕರ್ಣಿ ಕುಮಾರ್ ಹಾಗೂ ಗ್ರಾಮ ಸಹಾಯಕ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರ್ಕಾರದಿಂದ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News