Kanakagiri | ನೂತನ ನ್ಯಾಯಾಲಯದಿಂದ ಜನರಿಗೆ ಅನುಕೂಲ: ವಕೀಲ ಮಹೇಶ ಚಲುವಾದಿ

Update: 2026-07-17 21:22 IST

ಕನಕಗಿರಿ : ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಕಟ್ಟಡದ ಉದ್ಘಾಟನೆಯಿಂದ ಸ್ಥಳೀಯ ವಕೀಲರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಿದ್ದು, ನ್ಯಾಯಾಂಗ ಸೇವೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ ಎಂದು ಕಿರಿಯ ವಕೀಲ ಮಹೇಶ ಚಲುವಾದಿ ತಿಳಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕನಕಗಿರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಇದುವರೆಗೆ ನ್ಯಾಯಾಲಯದ ಕೆಲಸಗಳಿಗಾಗಿ ಬೇರೆ ತಾಲೂಕುಗಳಿಗೆ ತೆರಳಬೇಕಾಗುತ್ತಿತ್ತು. ಈಗ ಪಟ್ಟಣದಲ್ಲೇ ನ್ಯಾಯಾಲಯ ಆರಂಭವಾಗಿರುವುದರಿಂದ ಕಕ್ಷಿದಾರರಿಗೆ ಸಮಯ ಮತ್ತು ಹಣ ಎರಡೂ ಉಳಿತಾಯವಾಗಲಿದ್ದು, ತ್ವರಿತ ನ್ಯಾಯ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದರು.

ನೂತನ ನ್ಯಾಯಾಲಯ ಕಟ್ಟಡದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಇದರಿಂದ ನ್ಯಾಯಾಂಗ ವ್ಯವಸ್ಥೆ ಇನ್ನಷ್ಟು ಬಲಗೊಳ್ಳಲಿದೆ. ನ್ಯಾಯಾಲಯ ಆರಂಭಕ್ಕೆ ಕಾರಣರಾದ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಕ್ರಮವನ್ನು ಅವರು ಅಭಿನಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News