Kanakagiri | ಅತಿಥಿ ಉಪನ್ಯಾಸಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ಕನಕಗಿರಿ: ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಭೆಯು ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆಯಿತು.
ಸಭೆಯಲ್ಲಿ ತಾಲೂಕು ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘವನ್ನು ರಚಿಸಿ, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಂಘದ ಅಧ್ಯಕ್ಷರಾಗಿ ಸೋಮಶೇಖರ ಕಂಚಿ, ಉಪಾಧ್ಯಕ್ಷರಾಗಿ ಪೆನಜಾ, ಚನ್ನಪ್ಪ ಹಾಗೂ ಸಂಗಮೇಶ್ವರ, ಕಾರ್ಯದರ್ಶಿಯಾಗಿ ಮಾರುತಿ, ಖಜಾಂಚಿಯಾಗಿ ಸಾಯಿಕುಮಾರ್ ಕೆ.ಎಚ್. ಹಾಗೂ ಮಾಧ್ಯಮ ಸಲಹೆಗಾರರಾಗಿ ವಿಜಯ್ ಸರೋದೆ ಆಯ್ಕೆಯಾದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಬಜರಂಗಬಲಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.