ಕನಕಗಿರಿ: ತಾಲೂಕಿನ ಚಿಕ್ಕಮಾದಿನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ತಹಶೀಲ್ದಾರ್ ಚಂದ್ರಶೇಖರ ಗಾಳಿ ಅವರ ಅಧ್ಯಕ್ಷತೆಯಲ್ಲಿ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ಚಂದ್ರಶೇಖರ ಗಾಳಿ, ಸರ್ಕಾರದ ವಿವಿಧ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಸಾರ್ವಜನಿಕರು ತಮ್ಮ ಗ್ರಾಮಗಳ ಸಮಸ್ಯೆಗಳ ಕುರಿತು ಇಂತಹ ಕಾರ್ಯಕ್ರಮಗಳಲ್ಲಿ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ಪ್ರಜಾ ಸೇವಾ ಆಂದೋಲನದಲ್ಲಿ ವಿವಿಧ ಗ್ರಾಮಗಳ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ, ರಸ್ತೆ ಅಭಿವೃದ್ಧಿ, ಪಿಂಚಣಿ ಸ್ಥಗಿತ ಸೇರಿದಂತೆ ಹಲವು ಸಾರ್ವಜನಿಕ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅರ್ಜಿಗಳನ್ನು ಸ್ವೀಕರಿಸಿ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಕೆ. ರಾಜಶೇಖರ, ವೈದ್ಯಾಧಿಕಾರಿ ಗೌರಿಶಂಕರ, ಪ್ರಭಾರ ಸಿಡಿಪಿಒ ವಿಜಯಲಕ್ಷ್ಮೀ, ಉಪ ವಲಯ ಅರಣ್ಯಾಧಿಕಾರಿ ಎಸ್.ಎಂ.ಡಿ. ಸುಲೇಮಾನ, ಎಎಸ್‌ಐ ರಾಜು ಹಂಚಾಟೆ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ನಾಗೇಶ ಚಲುವಾದಿ, ಪಿಡಿಒ ಬಸವರಾಜ ಸಂಕನಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor