ಕನಕಗಿರಿ: ಕ್ರೀಡೆ ಕೇವಲ ಮನರಂಜನೆಯಲ್ಲ, ಅದು ಶಿಸ್ತು, ನಾಯಕತ್ವ ಹಾಗೂ ಸೋದರತ್ವದ ಗುಣಗಳನ್ನು ಕಲಿಸುತ್ತದೆ ಎಂದು ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಜರಂಗಬಲಿ ಹೇಳಿದರು.

ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮೇಜರ್ ಧ್ಯಾನ್‌ಚಂದ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಯುವಕರು ಪಠ್ಯ ಚಟುವಟಿಕೆಗಳ ಜೊತೆಗೆ ಕ್ರೀಡೆಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಪಡಿಸುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೂ ಸಹಕಾರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಶಂಭುಲಿಂಗಯ್ಯ ಸ್ವಾಮಿ, ಉಪನ್ಯಾಸಕರಾದ ರಕ್ಷಿತ್, ಸೋಮಶೇಖರ ಕಂಚಿ, ಮಾರುತಿ, ಚನ್ನಪ್ಪ, ಡಾ. ಬಸವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor