×
Ad

ಕನಕಗಿರಿ | ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆಯಿಂದ ಮಕ್ಕಳನ್ನು ರಕ್ಷಿಸಿ : ಕಲುಬಾಗಿಲಮಠ

Update: 2025-12-21 18:22 IST

ಕನಕಗಿರಿ: ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸಿ ಎಂದು ಪಟ್ಟಣ ಪಂಚಾಯತ್‌ ಸದಸ್ಯ ಸಿದ್ದೇಶ ಕಲುಬಾಗಿಲಮಠ ಹೇಳಿದರು.

ಭಾನುವಾರ ಪಟ್ಟಣದ 7ನೇ ವಾರ್ಡ್‌ನಲ್ಲಿ ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಇನ್ನೂ ನಾಲ್ಕುದಿನಗಳ ಕಾಲ ಜರುಗುವ ಅಭಿಯಾನದಲ್ಲಿ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಿ ಸಂಭವಿಸಬಹುದಾದ ಸಂಭವನೀಯ ಅಂಗವಿಕಲತೆಯಿಂದ ಮಕ್ಕಳನ್ನು ರಕ್ಷಿಸಿ ಎಂದು ಪೋಷಕರಿಗೆ ಸಲಹೆ ನೀಡಿದರು.

ಈ ವೇಳೆ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಮತ್ತು ಸಿಬ್ಬಂದಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News