ಕೊಪ್ಪಳ | ಸಿಜೆಐರೊಂದಿಗೆ ಅನುಚಿತವಾಗಿ ವರ್ತಿಸಿದ ವಕೀಲನ ವಿರುದ್ಧ ಕಠಿಣ ಕ್ರಮಕ್ಕೆ ಮನವಿ
ಕೊಪ್ಪಳ : ಭಾರತದ ಮುಖ್ಯ ಮ್ಯಾಯಮೂರ್ತಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ವಕೀಲನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದಿಂದ ಅಪರ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಇತ್ತೀಚೆಗೆ, ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆದ ಕೋರ್ಟ್ ಕಲಾಪದ ವೇಳೆ, ವಕೀಲ ರಾಕೇಶ್ ಕಿಶೋರ್ ಎಂಬ ವ್ಯಕ್ತಿಯು ಮಾನ್ಯ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರತ್ತ ಶೂ ಎಸೆದು ಅಪಮಾನಕಾರಿ, ಅಶಿಸ್ತಿನ ಕೃತ್ಯವನ್ನು ಎಸಗಿದ್ದು ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒಕ್ಕೂಟದಿಂದ ಆಗ್ರಹಿಸಿದೆ.
ಈ ಘಟನೆಯು ವ್ಯಕ್ತಿಗತ ಅವಮಾನವಲ್ಲ, ಇದು ಭಾರತದ ಸಂವಿಧಾನ ಹಾಗೂ ನ್ಯಾಯಾಂಗ ವ್ಯವಸ್ಥೆ ಶ್ರೇಷ್ಠತೆಯ ವಿರುದ್ಧ ನಡೆದ ತೀವ್ರ ಅವಮಾನವಾಗಿದೆ. ಸಂವಿಧಾನದ ಗೌರವ ಮತ್ತು ನ್ಯಾಯದ ನಿಲುವಿಗೆ ಗಂಭೀರ ಬೆದರಿಕೆ. ಕೋರ್ಟ್‌ನೊಳಗೆ ಇಂತಹ ವರ್ತನೆಗಳು ಸಾರ್ವಜನಿಕರಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಮನವಿ ಪತ್ರ ಸಲ್ಲಿಸಲಾಯಿತು.