koppal | ಗೂಡ್ಸ್ ವಾಹನಕ್ಕೆ ಬೈಕ್ ಢಿಕ್ಕಿ; ಇಬ್ಬರು ಬಾಲಕರ ಸಹಿತ ಮೂವರು ಮೃತ್ಯು
ಕುಕನೂರು: ಮೀಲಾದುನ್ನೆಬಿ ಪ್ರಯುಕ್ತ ಕೊಪ್ಪಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ನರಗುಂದದ ಮೂವರು ಯುವಕರು ಬನ್ನಿಕೊಪ್ಪ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ನರಗುಂದ ಪಟ್ಟಣದ ಮಾಬೂಸಾಬ್ (17), ಫಕ್ರುಸಾಬ್ (19) ಹಾಗೂ ಶಾನುಸಾಬ್ ಬಸಾಪುರ (15) ಎಂದು ಗುರುತಿಸಲಾಗಿದೆ.
ಮೂವರು ಯುವಕರು ಬೈಕ್‌ನಲ್ಲಿ ನರಗುಂದದಿಂದ ಕೊಪ್ಪಳದತ್ತ ಬರುತ್ತಿದ್ದರು. ಈ ವೇಳೆ ಬನ್ನಿಕೊಪ್ಪ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಪಂಚರ್ ಆಗಿ ರಸ್ತೆಬದಿಯಲ್ಲಿ ನಿಂತಿದ್ದ ಗೂಡ್ಸ್ ವಾಹನಕ್ಕೆ ಬೈಕ್ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಢಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಮೂವರು ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಾಹಿತಿ ತಿಳಿದ ಕುಕನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬುಧವಾರ ಸಾಯಂಕಾಲ ಮರಣೋತ್ತರ ಪರೀಕ್ಷೆ ಕುಕನೂರ ಆರೋಗ್ಯ ಕೇಂದ್ರದ ಶವಗಾರದಲ್ಲಿ ನಡೆದು ಬಳಿಕ ಅವರ ಸ್ವಗ್ರಾಮಕ್ಕೆ ಮೃತದೇಹಗಳನ್ನು ರವಾನಿಸಲಾಗಿದೆ.
ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.