Koppal | ನಿಂತಿದ್ದ ಲಾರಿಗೆ ಬೊಲೆರೋ ಢಿಕ್ಕಿ: ಮೂವರು ಮೃತ್ಯು, 8 ಮಂದಿಗೆ ಗಂಭೀರ ಗಾಯ

Update: 2026-07-21 19:01 IST

ಕೊಪ್ಪಳ: ತಾಲೂಕಿನ ಹಿಟ್ನಾಳ ಸಮೀಪದ ಕೆರೆಹಳ್ಳಿ–ಶಹಪುರ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿ–13ರಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಹುಲಿಗಿಯ ಖಾದರ್ ಖಾನ್ (88), ಖೈರುನಬಿ ಖಾದರ್ ಖಾನ್ (75) ಹಾಗೂ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮತ್ತೊಬ್ಬ ವ್ಯಕ್ತಿ ಎಂದು ಗುರುತಿಸಲಾಗಿದೆ.

ಗಾಯಗೊಂಡವರಲ್ಲಿ ಖಾಜಾಖಾನ್, ಶಬಾನ ಬೇಗಂ, ಸುಮಯ್ಯ, ಶೇರ್ ಖಾನ್, ಮುಹಮ್ಮದ್‌ ಶಬ್ಬಿರ್, ನೂರ್ ಜಾನ್, ಸನಾ ಅಂಜುಂ ಹಾಗೂ ಸಾಜೀಯಾ ಸೇರಿದ್ದಾರೆ.

ಕುಷ್ಟಗಿ ಮಾರ್ಗದಿಂದ ಹೊಸಪೇಟೆ ಕಡೆಗೆ ತೆರಳುತ್ತಿದ್ದ ಬೊಲೆರೋ ವಾಹನ, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ಢಿಕ್ಕಿಯ ರಭಸಕ್ಕೆ ಬೊಲೆರೋ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವರು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರ್‌ಟಿಒ ಅಧಿಕಾರಿಗಳು ತಪಾಸಣೆಗಾಗಿ ಲಾರಿಗಳನ್ನು ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನಿಲ್ಲಿಸುತ್ತಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News