ಕೊಪ್ಪಳ | ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ ಬಸ್
Update: 2026-08-09 18:44 IST
ಕೊಪ್ಪಳ: ಕೊಪ್ಪಳದಿಂದ ಕರ್ಕಿಹಳ್ಳಿ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಲಕ್ಕೆ ನುಗ್ಗಿದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಈ ಭಾಗದಲ್ಲಿ ರಸ್ತೆ ದುರಸ್ತಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಇದರಿಂದಾಗಿ ವಾಹನ ಪರಿಣಾಮ ವಾಹನ ಸವಾರರು ನಿತ್ಯವೂ ಪರದಾಡುವಂತಾಗಿದೆ. ಇದೇ ರಸ್ತೆಯಲ್ಲಿ ಈ ಹಿಂದೆ ಬಸ್ ವೊಂದು ಪಲ್ಟಿಯಾಗಿತ್ತು.
ರವಿವಾರವಾದ್ದರಿಂದ ಬಸ್‌ನಲ್ಲಿ ಶಾಲಾ ವಿದ್ಯಾರ್ಥಿಗಳು ಇರಲಿಲ್ಲ. ಆದರೆ ಸಾಮಾನ್ಯ ದಿನಗಳಲ್ಲಿ ಈ ಮಾರ್ಗದಲ್ಲಿ 150ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಪ್ರತಿನಿತ್ಯ ಸಂಚರಿಸುತ್ತಾರೆ. ಹೀಗಾಗಿ ರಸ್ತೆ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆಯೂ ಆತಂಕ ವ್ಯಕ್ತವಾಗಿದೆ.
ಇನ್ನು ಮುಂದೆ ಇಂತಹ ಅನಾಹುತ ಸಂಭವಿಸದಂತೆ ರಸ್ತೆ ದುರಸ್ತಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.