×
Ad

ಕೊಪ್ಪಳ | ಕ್ರೀಡೆಗಳ ಮೂಲಕ ಬೆಳೆಕಿಗೆ ಬನ್ನಿ : ಅಬ್ದುಲ್ ರಜಾಕ್

Update: 2026-03-05 19:38 IST

ಕೊಪ್ಪಳ: ಕ್ರೀಡೆಗಳ ಮೂಲಕ ವಿದ್ಯಾರ್ಥಿಗಳು ಬೆಳಕಿಗೆ ಬರಬೇಕು ಎಂದು ಭಾರತೀಯ ಪೆಂಕಾಕ್ ಸೀಲಾತ್ ಸಂಸ್ಥೆಯ ತಾಂತ್ರಿಕ ನಿರ್ದೇಶಕರಾದ ಅಬ್ದುಲ್ ರಾಜಾಕ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ, ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಅಂತರ ಮಹಾವಿದ್ಯಾನಿಲಯಗಳ ಪೆಂಕಾಕ್ ಸೀಲಾತ್ ಪಂದ್ಯಾವಳಿ ಮತ್ತು ವಿಶ್ವವಿದ್ಯಾಲಯ ತಂಡದ ಆಯ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸ್ಪರ್ಧೆ ಇದ್ದರೂ ಪೆಂಕಾಕ್ ಸೀಲಾತ್ ಕ್ರೀಡೆಯಲ್ಲಿ ಸ್ಪರ್ಧೆ ಕಡಿಮೆ ಇದೆ. ಉತ್ತಮ ಪ್ರದರ್ಶನ ನೀಡಿದರೆ ಬಹುಮಾನ ಗಳಿಸುವ ಅವಕಾಶಗಳು ಹೆಚ್ಚು. ಸರ್ಕಾರದಿಂದ ಕ್ರೀಡೆಗಳಿಗೆ ದೊರೆಯುವ ಅನುದಾನವನ್ನು ಸದುಪಯೋಗಪಡಿಸಿಕೊಂಡು ಕ್ರೀಡೆಗಳ ಮೂಲಕ ಬೆಳವಣಿಗೆ ಸಾಧಿಸಬೇಕು ಎಂದು ಅವರು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪ್ರೊ. ಅಲ್ಲಮ ಪ್ರಭು ಬೆಟ್ಟದೂರು ಮಾತನಾಡಿ, ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ. ಗೆಲುವು-ಸೋಲು ಮುಖ್ಯವಲ್ಲ, ಕ್ರೀಡೆಯಲ್ಲಿ ಪಾಲ್ಗೊಳ್ಳುವುದೇ ಮುಖ್ಯ. ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಗೀತ ಮತ್ತು ಕ್ರೀಡೆಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಂಘಟನಾ ಕಾರ್ಯದರ್ಶಿ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರಾದ ಪ್ರದೀಪ್ ಕುಮಾರ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಿಗುತ್ತದೆ. ಸರ್ಕಾರಿ ಹುದ್ದೆಗಳಲ್ಲಿ ಕ್ರೀಡಾ ಮೀಸಲಾತಿ ಸೌಲಭ್ಯ ಇರುವುದರಿಂದ ಅದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಕ್ರೀಡೆಗಳು ಮಾನಸಿಕ, ದೈಹಿಕ ಮತ್ತು ಆರ್ಥಿಕ ಸದೃಢತೆಗೆ ಸಹಕಾರಿಯಾಗುತ್ತವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಮಾತನಾಡಿ, ವಿದ್ಯಾರ್ಥಿಗಳು ಹೊಸ ಕ್ರೀಡೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಬೇಕು. ಆಧುನಿಕ ಕಾಲದಲ್ಲಿ ಕ್ರೀಡೆಗಳು ಆರೋಗ್ಯ ವೃದ್ಧಿಗೆ ಅತ್ಯಂತ ಅಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿ. ಜಿ ಕರಿಗಾರ, ವಿಠಲ ಬಿ ಜಾಬ ಗೌಡರ್, ಎ ಬಸವರಾಜ, ಮಂಜುನಾಥ್ ಅರೇಂಟುನೂರು, ಗವಿಸಿದ್ದಪ್ಪ ಮುತ್ತಾಳ, ಮಂಜುನಾಥ್ ಗೊಂಡಬಾಳು, ವಿನೋದು, ವಿಶ್ವನಾಥ್ ನಡುಕಟ್ಟಿ, ಶುಭ, ಸುಮಿತ್ರಾ ಹಾಗೂ ಸುಮಯ್ಯ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಡಾ. ಹುಲಿಗೆಮ್ಮ ಅವರು ನಿರೂಪಿಸಿದರು. ಡಾ. ನರಸಿಂಹ ಸ್ವಾಗತಿಸಿ ವಂದಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಗೀತೆ ಹಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News