×
Ad

Koppala | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Update: 2026-03-08 10:23 IST

ಕನಕಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ರಾಮದುರ್ಗ ಗ್ರಾಮದಲ್ಲಿ ನಡೆದಿದೆ.

ನಾಗಪ್ಪ ತಳವಾರ (54) ಆತ್ಮಹತ್ಯೆಗೈದ ರೈತ. ನಾಗಪ್ಪ ತಳವಾರ ಮಕ್ಕಳ ಮದುವೆ, ಹೈನುಗಾರಿಕೆಗಾಗಿ ಬ್ಯಾಂಕ್ ಹಾಗೂ ಸಹಕಾರಿ ಸಂಘ ಮತ್ತು ಕೈಸಾಲ ಮಾಡಿಕೊಂಡಿದ್ದರು. ಆದರೆ ಮಳೆ-ಬೆಳೆ ಆಗದೇ ನಷ್ಟವಾಗಿದ್ದರಿಂದ ಮನನೊಂದು ಮಾ.6ರ ರಾತ್ರಿ ಊಟದ ಬಳಿಕ ಜಮೀನಿಗೆ ಹೋಗಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಮೃತನ ಪತ್ನಿ ಹುಲಿಗೆಮ್ಮ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News