×
Ad

ಕೊಪ್ಪಳ | ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರ ಬಂಧನ

Update: 2025-11-17 10:45 IST

ಕೊಪ್ಪಳ: ಮಾದ್ಲೂರು ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಬಲವಂತವಾಗಿ ಮತ್ತು ಬರಿಸುವ ಪಾನೀಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಯಲಬುರ್ಗಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮಣ ಕೆಂಚಪ್ಪ ಕರಗುಳಿ ರೋನ್, ಬಸವರಾಜ ಸಕ್ರೆಪ್, ಭೀಮಪ್ಪ ಮಹದೇವಪ್ಪ ಮಸ್ಕಿ ಹನುಮಾಪುರ ಮತ್ತು ಶಾಹಿಕುಮಾರ ಮಹದೇವಪ್ಪ ಮಸ್ಕಿ ಹನುಮಾಪುರ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ಮೂಲದ 36 ವರ್ಷದ ಮಹಿಳೆ ಸಂತ್ರಸ್ತೆಯಾಗಿದ್ದಾರೆ. ಸಮಾಜ ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಮಹಿಳೆಗೆ ಪರಿಚಯಸ್ಥನಾಗಿದ್ದ ಆರೋಪಿಗಳಲ್ಲಿ ಓರ್ವನಾದ ಲಕ್ಷ್ಮಣ ಹಣ ಕೊಡಲು ಬಾಕಿಯಿತ್ತೆನ್ನಲಾಗಿದ. ಬಾಕಿ ಹಣ ಕೊಡುತ್ತೇನೆ ಎಂದು ಆರೋಪಿ ಲಕ್ಷ್ಮಣ ರವಿವಾರ ಸಂಜೆ ಮಹಿಳೆಯನ್ನು ಕುಷ್ಟಗಿಗೆ ಕರೆಸಿಕೊಂಡಿದ್ದ. ಅಲ್ಲಿಂದ ಮಹಿಳೆಯನ್ನು ಇತರ ಮೂವರು ಆರೋಪಿಗಳೊಂದಿಗೆ ಸೇರಿಕೊಂಡು ಬೈಕಿನಲ್ಲಿ ಮಾದ್ಲೂರು ಗ್ರಾಮಕ್ಕೆ ಕರೆದೊಯ್ದು ಜ್ಯೂಸ್ ಎಂದು ಮತ್ತು ಬರುವ ಪಾನೀಯ ಕುಡಿಸಿದ್ದಾನೆ. ಬಳಿಕ ಪಾಳುಬಿದ್ದ ಮನೆಯೊಂದಕ್ಕೆ ಕರೆದೊಯ್ದ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಸದ್ಯ ಸಂತ್ರಸ್ತೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News